ವರದಿ:ರತ್ನಾಕರ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ: ನಾಗರ ಪಂಚಮಿಯ ಶುಭದಿನವಾದ ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಮತ್ತು ಹೈದರಬಾದ್ನ ಎಎಂಆರ್ ಗ್ರಾಪ್ನ ಆಡಳಿತ ನಿರ್ದೇಶಕ ಎ.ಮಹೇಶ್ ರೆಡ್ಡಿ ಸುಮಾರು 7 ಲಕ್ಷ ರೂ ಮೌಲ್ಯದ ಪುಂಗನೂರು ತಳಿಯ 4 ಗೋವುಗಳನ್ನು ದಾನವಾಗಿ ನೀಡಿದರು. ಶ್ರೀ ದೇವಳದ ನಾಗಪ್ರತಿಷ್ಠಾ ಮಂಟಪದ ಬಳಿ ಗೋವುಗಳಿಗೆ ವಿಶೇಷ
ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.ಬಳಿಕ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಗೋವುಗಳನ್ನು ಶ್ರೀ ದೇವಳಕ್ಕೆ ಹಸ್ತಾಂತರಿಸಲಾಯಿತು.
ಹೈದರಬಾದ್ ಮೂಲದ ಉದ್ಯಮಿಗಳಾದ ಎ.ಮಹೇಶ್ ರೆಡ್ಡಿಯವರು ಕುಕ್ಕೆ ಸುಬ್ರಹ್ಮಣ್ಯನ ಅಪ್ರತಿಮ ಭಕ್ತರಾಗಿದ್ದು ಈ ಹಿಂದೆ ಸುಮಾರು ರೂ 27 ಲಕ್ಷದಲ್ಲಿ ಬೋಜನ ಪ್ರಸಾದ ತಯಾರಿಕಾ ಮತ್ತು ಲಾಡು ಪ್ರಸಾದ ತಯಾರಿಕಾ ಯಂತ್ರೋಪಕರಣಗಳನ್ನು, ಷಣ್ಮುಖ ಪ್ರಸಾದ ಬೋಜನ ಶಾಲೆಗೆ ಬೋಜನ ಪ್ರಸಾದ ವಿತರಣೆಗೆ ಗಾಡಿಗಳನ್ನು ನೀಡಿದ್ದರು.

ಕಾಣಿಕೆ ರೂಪದಲ್ಲಿ ಶ್ರೀ ದೇವಳಕ್ಕೆ ಅರ್ಪಿಸಿದ್ದರು. ಇದೀಗ ನಾಗರಪಂಚಮಿಯ ಶುಭ ದಿನ ಶ್ವೇತ ವರ್ಣದ ೩ ಗೋವುಗಳನ್ನು ಹಾಗೂ ೧ ಕರುವನ್ನು ದಾನವಾಗಿ ನೀಡಿದ್ದಾರೆ. ಶ್ರೀ ದೇವರ ದರುಶನ ಪಡೆದ ದಾನಿಗಳಿಗೆ ದೇವಳದ ಅರ್ಚಕರು ಶಾಲು ಹೊದಿಸಿ ಮಹಾ ಪ್ರಸಾದ ನೀಡಿದರು.ಬಳಿಕ ದೇವಳದ ಆಡಳಿತ ಕಚೇರಿಯಲ್ಲಿ ಉದ್ಯಮಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.