ಅಹಮದಾಬಾದ್: ಐಪಿಎಲ್ನ ಬೃಹತ್ ಮೊತ್ತದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ಗೆ ರೋಚಕ ಜಯ.
ತಮ್ಮ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಗುಜರಾತ್ ದಿಟ್ಟ ಹೋರಾಟ ನೀಡಿ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿತು. ಪಂಜಾಬ್ 11 ರನ್ಗಳ ರೋಚಕ ಜಯ ದಾಖಲಿಸಿತು. ಒಟ್ಟಾರೆ ಈ ಪಂದ್ಯದಲ್ಲಿ
40 ಓವರ್ಗಳಲ್ಲಿ 475 ರನ್ ದಾಖಲಾಯಿತು.ಗುಜರಾತ್ಗೆ ನಾಯಕ ಶುಭ್ಮನ್ ಗಿಲ್ ಹಾಗೂ ಸಾಯ್ ಸುದರ್ಶನ್ ಮೊದಲ ವಿಕೆಟ್ಗೆ 5.5 ಓವರ್ಗಳಲ್ಲಿ 61ರನ್ ಗಳಿಸಿ ಬಿರುಸಿನ ಆರಂಭ ನೀಡಿದರು. ಗಿಲ್ 14 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿದರೆ, ಸಾಯ್ ಸುದರ್ಶನ್ 41ಎಸೆತಗಳಲ್ಲಿ 5 ಬೌಂಡರಿ 6 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿ ಟಾಪ್ ಸ್ಕೋರರ್ ಆದರು. ಜೋಸ್ ಬಟ್ಲರ್ 33 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರೆ, ರುದರ್ಫೋರ್ಡ್ 28 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿ ಹೋರಾಟ ನಡೆಸಿದರೂ 11 ರನ್ಗಳ ಅಂತರದಲ್ಲಿ ಮುಗ್ಗರಿಸಿತು.
ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡಿತು. ಪಂಜಾಬ್ ಪರ ನಾಯಕ ಶ್ರೇಯಸ್ ಅಯ್ಯರ್ 42 ಎಸೆತಗಳಲ್ಲಿ 5 ಬೌಂಡರಿ 9 ಸಿಕ್ಸರ್ ನೆರವಿನಿಂದ ಅಜೇಯ 97 ರನ್ ಗಳಿಸಿದರು.
ಪಿ ಆರ್ಯ 23 ಎಸೆತಗಳಲ್ಲಿ 7 ಬೌಂಡರಿ 2 ಸಿಕ್ಸರ್ ನೆರವಿನಿಂದ 47 ರನ್ ಗಳಿಸಿದರೆ, ಕೊನೆಯಲ್ಲಿ ಶಶಾಂಕ್ ಸಿಂಗ್ ಕೇವಲ 16
ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ನೆರವಿನಿಂದ ಅಜೇಯ
44 ರನ್ ಗಳಿಸಿ ಬೃಹತ್ ಮೊತ್ತ ಪೇರಿಸಲು ನೆರವಾದರು. ಗುಜರಾತ್ ಪರ ಸಾಯಿ ಕಿಶೋರ್ 3 ವಿಕೆಟ್ ಪಡೆದರು.