ಬಾಳಿಲ:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿದ್ಯಾಭೋಧಿನಿ ಪ್ರೌಢ ಶಾಲೆ ಬಾಳಿಲ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಯುವ ಸಾಹಿತ್ಯ ಸಂಭ್ರಮದ ಅಂಗವಾಗಿ ಪುರಾಣ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಬಾಳಿಲ ವಿದ್ಯಾಭೋದಿನೀ ಪ್ರೌಢ ಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ
ಶಾಲೆಯ ಅಧ್ಯಕ್ಷ ರಾಧಾಕೃಷ್ಣ ರಾವ್ ಮಾತನಾಡಿ ಪುರಾಣ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಆಸಕ್ತಿಯನ್ನು ಮೂಡಿಸಬಹುದು ಎಂದು ಹೇಳಿದರು.ಮಳೆ ದಾಖಲೆಗಾರರು ಹಾಗೂ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಅವರನ್ನು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ವೆಂಕಟರಾಮ್ ಭಟ್ ಸುಳ್ಯ ಹಾಗು ರಚನಾ ಚಿದ್ಗಲ್ ಅವರಿಂದ ‘ಭರತನ ಭ್ರಾತೃ ಪ್ರೇಮ’ ಎಂಬ ವಿಷಯದ ಬಗ್ಗೆ ಗಾಯನ ಮತ್ತು

ವಾಚನ ಕಾರ್ಯಕ್ರಮ ನಡೆಯಿತು.ದಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ್ ಪೆರಾಲ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ
ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಉಪಸ್ಥಿರಿದ್ದರು. ಕಾರ್ಯಕ್ರಮ ಸಂಚಾಲಕ ಸಂಜೀವ ಕುದ್ಪಾಜೆ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ರೈ ಎಸ್. ವಂದಿಸಿದರು. ಶಿಕ್ಷಕ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.























