ಸುಳ್ಯ:ಸುಳ್ಯ ನಗರ ಪಂಚಾಯತ್ತನ್ನು ಮೇಲ್ದರ್ಜೆಗೇರಿಸಿ ಪುರಸಭೆಯನ್ನಾಗಿ ಪರಿವರ್ತಿಸುವಂತೆ ಪೌರಾಡಳಿತ ಸಚಿವರಿಗೆ ಕೆಪಿಸಿಸಿ ಅಲ್ಪಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ
ಮನವಿ ಸಲ್ಲಿಸಿದ್ದಾರೆ. ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈ ಹಿಂದೆಯೇ ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಅದನ್ನು ಅನುಷ್ಠಾನ ಮಾಡಬೇಕೆಂದು ಮನವಿಯಲ್ಲಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು ಅಧಿವೇಶನ ಮುಗಿದ ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕೆ.ಎಂ.ಮುಸ್ತಫ ತಿಳಿಸಿದ್ದಾರೆ.