ಸುಳ್ಯ: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್ ಅವರು ಇಂದು ಸುಳ್ಯದ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ,
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ಸ್ವಾಗತಿಸಿದರು. ಮಹಮ್ಮದ್ ಇಕ್ಬಾಲ್ ಎಲಿಮಲೆ, ಕೆ.ಎಸ್.ಉಮ್ಮರ್, ನಗರ ಪಂಚಾಯತ್ ಸದಸ್ಯ ಸಿದ್ದೀಕ್ ಕೊಕ್ಕೋ , ಬಶೀರ್ ಅಹ್ಮದ್ ನೇಲ್ಯಮಜಲು ಮತ್ತಿತರರು ಉಪಸ್ಥಿತರಿದ್ದರು.