ಸುಳ್ಯ:ಕರ್ನಾಟಕ ಸರ್ಕಾರದ ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ (ಕಾಲೇಜು ವಿಭಾಗ) ಇದರ ಆಶ್ರಯದಲ್ಲಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ
ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ
ಹುಡುಗರ ವಿಭಾಗದಲ್ಲಿ ಎನ್ಎಂಪಿಯುಸಿ ಸುಳ್ಯ ಪ್ರಥಮ ಹಾಗೂ ಗುತ್ತಿಗಾರು ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಹುಡುಗಿಯರ ವಿಭಾಗದಲ್ಲಿ ಎನ್ಎಂಪಿಯುಸಿ ಅರಂತೋಡು ಪ್ರಥಮ ಸ್ಥಾನ ಹಾಗೂ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ನ.ಪಂ.ಸದಸ್ಯ ಶರೀಫ್ ಕಂಠಿ ಹಘೂ ಕೆಪಿಎಸ್ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಚಿದಾನಂದ ಕುದ್ಪಾಜೆ, ಪ್ರಾಂಶುಪಾಲ ಅಬ್ದುಲ್ ಸಮದ್ ಮತ್ತಿತರರು ವಿಜೇತರಿಗೆ ಬಹುಮಾನ ವಿತರಿಸಿದರು.