ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತಪಟ್ಟವರು ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ್, ಅವರ ಪುತ್ರ ಚಿದಾನಂದ ಹಾಗೂ ಸಂಬಂಧಿ ರಮೇಶ್ ನಾಯ್ಕ್ ಎಂದು ತಿಳಿದು ಬಂದಿದೆ.ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.ಮುಂಜಾನೆ ವೇಳೆ ಘಟನೆ ನಡೆದಿರುವ ಸಾಧ್ಯತೆ ಇದೆ. ಮೃತ ದೇಹಗಳನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.