ಪುತ್ತೂರು: ಕರ್ನಾಟಕ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ ಮತ್ತು ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮ ಪುತ್ತೂರಿನಲ್ಲಿ ಫೆ.17ರಂದು ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಉದ್ಯಾನವನದಲ್ಲಿ ನಡೆಯಿತು.ಪುತ್ತೂರು

ಶಾಸಕ ಅಶೋಕ್ ಕುಮಾರ್ ರೈ ಧ್ವಜ ಸ್ತಂಭ ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಿದರು.ಎನ್ಸಿಸಿ, ಸ್ಕೌಟ್ಸ್ ಗೈಡ್ಸ್, ಎರ್ಪೋರ್ಸ್ ತಂಡ ಆಕರ್ಷಕ ಪಥ ಸಂಚಲನ ನಡೆಯಿತು. ಈ ಸಂದರ್ಭ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ನಿಹಾಲ್ ಪಿ ಶೆಟ್ಟಿ, ಅನ್ವರ್ ಖಾಸಿಂ, ಸದಸ್ಯ ಕಾರ್ಯದರ್ಶಿ ಗುರುಪ್ರಸಾದ್, ನಗರಸಭೆ ಪೌರಾಯುಕ್ತೆ ವಿದ್ಯಾ ಕಾಳೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.





