ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ತಿರಂಗ ಯಾತ್ರೆ ಸಮಿತಿ ವತಿಯಿಂದ ಶನಿವಾರ ಪುತ್ತೂರಿನಲ್ಲಿ ಬೃಹತ್ ತಿರಂಗ ಯಾತ್ರೆ ನಡೆಯಿತು.
ರಾಷ್ಟ್ರಧ್ವಜ ಹಿಡಿದ ಸಾವಿರಾರು ಮಂದಿ ಭಾಗವಹಿಸಿದ್ದರು.ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಿಂದ ಕಿಲ್ಲೆ ಮೈದಾನದ ತನಕ
ತಿರಂಗ ಯಾತ್ರೆ ನಡೆಯಿತು.ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ. ರವಿ
ಮಾತನಾಡಿದರು.ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ತಿರಂಗ ಯಾತ್ರೆಯ ರಾಜ್ಯ ಸಂಚಾಲಕಿ ರೂಪಾಲಿ ನಾಯ್ಕ್, ವಿಭಾಗ ಪ್ರಭಾರಿ ಭಾರತೀಶ್, ಜಿಲ್ಲೆಯ ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್ ಪುತ್ತೂರು ಉಪಸ್ಥಿತರಿದ್ದರು.
ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಸ್ವಾಗತಿಸಿದರು. ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ವಂದಿಸಿದರು. ಹರಿಪ್ರಸಾದ್ ಯಾದವ್ ನಿರೂಪಿಸಿದರು.












