ಮಂಗಳೂರು:ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿಗೆ ಮತ್ತು ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ
ಸಭೆಯಲ್ಲಿ ಭಾಗವಹಿಸಿದ ಶಾಸಕರು ಸಚಿವರಿಗೆ ಮನವಿ ಸವಿಸಿದ್ದಾರೆ. ಕ್ಷೇತ್ರದ ಪ್ರಮುಖ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿಗೆ, 45 ಹೆಚ್ಚು ಕಿರು ಸೇತುವೆಗಳು ಹಾಗೂ ವಿವಿಧ ಕಡೆ ಸೇತುವೆಗಳ ನಿರ್ಮಾಣಕ್ಕೆ ಅನುದಾನ ನೀಡಬೇಕೆಂದು ಅವರು ಸಲ್ಲಿಸಿದ ಮನವಿಯಲ್ಲಿ ವಿನಂತಿಸಲಾಗಿದೆ. ಸುಳ್ಯದ ಪ್ರವಾಸಿ ಮಂದಿರದ ನಿರ್ಮಾಣ ಕಾಮಗಾರಿ ಕೂಡಲೇ ಆರಂಭಿಸಬೇಕು ಎಂದು ಅವರು ಸಚಿವರಲ್ಲಿ ಮನವಿ ಮಾಡಿದರು. ಮರಳು ನೀತಿಯನ್ನು ಸರಳೀಕರಣ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಮತಿ ಮತ್ತು ಮರಳು ವಿತರಣೆಗೆ ವ್ಯವಸ್ಥೆ ಮಾಡಿ ಜನರಿಗೆ ಸುಲಭವಾಗಿ ಮರಳು ಲಭಿಸುವಂತೆ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಆಗ್ರಹಿಸಿದ್ದಾರೆ.