ನವದೆಹಲಿ:ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.’ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ
ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.’ನಮ್ಮ ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಏನೂ ಇಲ್ಲ. ನಮ್ಮ ಯುವಜನರ ಭವಿಷ್ಯ ಹಾನಿ ಮಾಡಲು ಪ್ರಯತ್ನಿಸುವವರನ್ನು ಸುಮ್ಮನೆ ಬಿಡುವುದಿಲ್ಲ’
ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಸರಣಿ ಕ್ರಮಗಳಲ್ಲಿ ಇದೂ ಒಂದಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.








