ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಅಂಗವಾಗಿ “ಸುವರ್ಣ ಕರ್ನಾಟಕ ಸಂಭ್ರಮ”- 50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಇದರ ವಿಶೇಷ ಕಾರ್ಯಕ್ರಮದ
ಅಡಿಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆ ನಡೆಯಿತು. ಕೃತಸ್ವರ ದೀಪ್ತ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಸುಳ್ಯ ಪ್ರಥಮ ಸ್ಥಾನ , ಅಮೃತ ಎಮ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ದ್ವಿತೀಯ ಸ್ಥಾನ ಮತ್ತು ಅಸ್ರೀನಾ ಎ .ಆರ್ ದ್ವಿತೀಯ ಪಿಯುಸಿ ಕಲಾ ವಿಭಾಗ ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ತೃತೀಯ ಸ್ಥಾನ ವನ್ನು ಪಡೆದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಬಾಲಕೃಷ್ಣ .ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಪ್ರಾಂಶುಪಾಲರಾದ ದಯಾಮಣಿ .ಕೆ ಇವರು ಸ್ಪರ್ಧೆಯನ್ನು ಸಂಘಟಿಸಿದರು.