ಸುಳ್ಯ:ಬ್ರಹ್ಮಗಿರಿ ಸಹೋದಯ ಕೊಡಗು ಇದರ ಸಹಯೋಗದೊಂದಿಗೆ ಎ.ಎಲ್.ಜಿ ಕ್ರೆಸೆಂಟ್ ಶಾಲೆ ಮಡಿಕೇರಿ ಇವರು ಆಯೋಜಿಸಿದ’ಕನ್ನಡ ಕಲರವ’ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ
ಸೋನಾ ನಾರ್ಕೋಡು 10 ನೇ ತರಗತಿ, ಮನ್ವಿತಾ ಸಿ.ಆರ್ ಹತ್ತನೇ ತರಗತಿ, ಮಾನ್ವಿ ಎ .ವೈ 9ನೇ ತರಗತಿ, ಶರ್ವ. ಕೆ 8ನೇ ತರಗತಿ ಇವರು ಭಾಗವಹಿಸಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಕನ್ನಡ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿ ಸಹಕರಿಸಿದರು.ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರು ಅಭಿನಂದಿಸಿ, ಶುಭ ಹಾರೈಸಿದರು. ಪ್ರಾಂಶುಪಾಲ ಅರುಣ್ ಕುಮಾರ್ ರವರು ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿ, ಗೌರವಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ , ಶಾಲೆಯ ಎಲ್ಲಾ ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













