ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭಗರ ಕ್ಷೇತ್ರದ ಶಾಸಕ ಆರ್. ಆಶೋಕ ಅವರನ್ನು ಆಯ್ಕೆ ಮಾಡಲಾಗಿದೆ.ಇಲ್ಲಿನ ಐಟಿಸಿ ಗಾರ್ಡೆನಿಯಾ ಹೋಟೆಲ್ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ
ಈ ತೀರ್ಮಾನ ತೆಗೆದುಕೊಳ್ಳಲಾಯಿತು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆರ್. ಆಶೋಕ ಅವರ ಹೆಸರನ್ನು ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಉಳಿದ ಶಾಸಕರು ಅನುಮೋದಿಸಿದರು.
ವಿರೋಧ ಪಕ್ಷದ ನಾಯಕನ ಆಯ್ಕೆಗೆ ಹೈಕಮಾಂಡ್ನಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ದಿಷ್ಯಂತ್ ಕುಮಾರ್ ಗೌರವ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಮಿಸಿದ್ದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಇದ್ದರು.









