ಗುವಾಹಟಿ: ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಸಿಡಿಸಿದ ಆಕರ್ಷಕ ಶತಕದ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿದೆ. ಋತುರಾಜ್ ಗಾಯಕ್ವಾಡ್ ಕೇವಲ
57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 123 ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 39 ರನ್ ಬಾರಿಸಿದರು. ತಿಲಕ್ ವರ್ಮಾ 24 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ ಅಜೇಯ 31ರನ್ ಗಳಿಸಿದರು. ಯಶಸ್ವಿ ಜೈಸ್ವಾಲ್( 6), ಇಸಾನ್ ಕಿಸನ್(0) ಬೇಗನೇ ಔಟ್ ಆದರು.ಮೊದಲ ಎರಡು ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಕಂಡಿರುವ ಭಾರತದ ಯುವ ತಂಡ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದೆ.