ಸುಳ್ಯ: ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಅಧಿಕಾರಿಗಳ ಸಂಘ ಸುಳ್ಯ ಮತ್ತು ಸಾವಾ ವೆಟ್ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗನಿರೋಧಕ ಲಸಿಕಾ ಕಾರ್ಯಕ್ರಮ ಮತ್ತು ಒಳ ಮತ್ತು ಹೊರ ಪರೋಪ ಜೀವಿಗಳ ನಿವಾರಣೆ
ಕಾರ್ಯಕ್ರಮ ನಡೆಯಿತು . ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕೆ ವಿ ಕರುಣಾಕರ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸುಳ್ಯದ ಉಪ ಪ್ರಾಂಶುಪಾಲರ
ಪ್ರಕಾಶ ಮುಡಿತಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಅಧಿಕಾರಿ ರಶ್ಮಿ ಕೆ. ಎಂ, ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್. ಅತಿಥಿಗಳಾಗಿ ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ಸುಮಾರು 40ಕ್ಕೂ ಹೆಚ್ಚು ನಾಯಿಗಳಿಗೆ ಉಚಿತವಾಗಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಹಾಕಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು