ಸುಳ್ಯ:ಸಂಪಾಜೆ,ಆಲೆಟ್ಟಿ ಗ್ರಾಮದಲ್ಲಿ ಗಾಳಿ, ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪುತ್ತೂರು ಸಹಾಯಕ ಕಮೀಷನರ್ ಅವರಿಗೆ ಮನವಿ ಮಾಡಿದ್ದಾರೆ.ಸುಳ್ಯದಲ್ಲಿ ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಅವರನ್ನು ಭೇಟಿ ಮಾಡಿ ಕಳೆದ ದಿನಗಳಲ್ಲಿ
ಬೀಸಿದ ಗಾಳಿ ಹಾಗು ಮಳೆಗೆ ಸಂಪಾಜೆ ಗ್ರಾಮದ ಚಟ್ಟೆಕಲ್ಲು,ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲ್ ಮತ್ತಿತರ ಕಡೆಗಳಲ್ಲಿ ಮನೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ ಸಂಭವಿಸಿದೆ.ಈ ಕುಟುಂಬ ಪರ್ಯಾಯ ವ್ಯವಸ್ಥೆ ಮಾಡಬೇಕು, ಅವರಿಗೆ ಪರಿಹಾರ ನೀಡಬೇಕು ಎಂದು ಬೊಳ್ಳೂರು ಹೇಳಿದರು.ಸೂಕ್ತ ಕ್ರಮ ಕೈಗೊಳ್ಳಲು ಸಹಾಯಕ ಕಮೀಷನರ್ ಅಧಿಕಾರಿಗಳಿಗೆ ಸೂಚಿಸಿದರು.ಭವಾನಿಶಂಕರ ಕಲ್ಮಡ್ಕ, ಸತ್ಯಕುಮಾರ್ ಆಡಿಂಜ ಮತ್ತಿತರರು ಇದ್ದರು.








