ಸುಳ್ಯ:ಶ್ರೀ ರಾಯರು ಬೇಡಿದನ್ನು ನೀಡುವ ಕಾಮಧೇನು ಮತ್ತು ಕಲ್ಪವೃಕ್ಷ. ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನೆಯಿಂದ ಸಮೃದ್ಧಿ, ಸಂತಸ ಉಂಟಾಗುತ್ತದೆ ಎಂದು ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಗುರು ರಾಘವೇಂದ್ರ ಮಠ ಹಾಗೂ ಬೃಂದಾವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುವ
ಎರಡನೇ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರಿಗೆ ಪ್ರದಾನ ಮಾಡಿ ಅವರು ಆಶೀರ್ವಚನ ನೀಡಿದರು. ಅಳಿವಿಲ್ಲದ ಶಿಕ್ಷಣ ಕ್ಷೇತ್ರವನ್ನು ಆಯ್ಕೆ ಮಾಡಿ ನಾಡಿಗೆ ಜ್ಞಾನದ ಬೆಳಕನ್ನು ಹರಿಸಿಸಿದವರು ಡಾ.ಕುರುಂಜಿ ವೆಂಕಟ್ರಮಣ ಗೌಡರು. ಅವರ ಪರಂಪರೆಯನ್ನು ಮುಂದುವರಿಸುವವರು ಡಾ.ಕೆ.ವಿ.ಚಿದಾನಂದ ಅವರು. ಅವರಿಗೆ ರಾಘವೇಂದ್ರಾನುಗ್ರಹ ಪ್ರಶಸ್ತಿ ನೀಡಿರುವುದು ಸ್ತುತ್ಯರ್ಹ ಎಂದು ಅವರು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮಾತನಾಡಿ’ ಶಿಕ್ಷಣದಿಂದ ನಾಡಿನ ಅಭಿವೃದ್ಧಿ ಸಾಧ್ಯ, ವಿದ್ಯೆ ಎಲ್ಲಾ ಆಸ್ತಿಗಿಂತಲೂ ದೊಡ್ಡ ಸಂಪತ್ತು ಎಂದರು.ದೇವಸ್ಥಾನಗಳು ಅಭಿವೃದ್ಧಿಯಾಗಿ ದೇವರ ಅನುಗ್ರಹ ಇದ್ದರೆ ಎಲ್ಲಾ ಕೆಲಸಗಳು ಯಶಸ್ವಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಭಾಷಣ ಮಾಡಿದರು. ಅಜ್ಜಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ

ಆಡಳಿತ ಮೊಕ್ತೇಸರ ಶಿವರಾವ್ ಬಯಂಬು,ಎಂ.ಬಿ. ಫೌಂಡೇಶನ್ನ ಅಧ್ಯಕ್ಷ ಎಂ.ಬಿ.ಸದಾಶಿವ,ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಡಾ.ವಿಷ್ಣುಮೂರ್ತಿ ಆಚಾರ್ ಸುಳ್ಯ ಮಾತನಾಡಿದರು.
ಮಮತಾ ಮೂಡಿತ್ತಾಯ ಸ್ವಾಗತಿಸಿ, ಪ್ರವೀಣ್ ರಾವ್ ದೊಡ್ಡತೋಟ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.














