ಸುಳ್ಯ:ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಏ.21 ಮತ್ತು 22 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬೃಂದಾವನ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಗುರು ರಾಘವೇಂದ್ರ ಮಠ ಹಾಗೂ ಬೃಂದಾವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುವ
ಎರಡನೇ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಪ್ರಥಮ ಪ್ರಶಸ್ತಿ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಅವರಿಗೆ ನೀಡಲಾಗಿತ್ತು.
ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇ ದಿನ ಏ.22ರಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಏ.22 ರಂದು 12ಗಂಟೆಗೆ ನಡೆಯುವ ಸಮಾರಂಭದಲ್ಲಿ ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು.ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅಧ್ಯಕ್ಷತೆ ವಹಿಸುವರು. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಭಾಷಣ ಮಾಡುವರು. ಅಜ್ಜಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕೇಸರಬಯಂಬು,ಎಂ.ಬಿ. ಫೌಂಡೇಶನ್ನ ಅಧ್ಯಕ್ಷ
ಎಂ.ಬಿ.ಸದಾಶಿವ,ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಡಾ.ವಿಷ್ಣುಮೂರ್ತಿ ಆಚಾರ್ ಸುಳ್ಯ ಭಾಗವಹಿಸಲಿದ್ದಾರೆ.
ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ:
ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 8ನೇ ವರ್ಷದ
ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಶ್ರೀ ಗುರುರಾಯರ ಮಠದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀಹರಿ ಎಳಚಿತ್ತಾಯರ ಮಾರ್ಗದರ್ಶನದಲ್ಲಿ ಏ.21 ಮತ್ತು 22ರಂದು ನಡೆಯಲಿದೆ. ಏ.21ರಂದು ಪೂರ್ವಾಹ್ನ 7ರಿಂದ ಮಹಾಗಣಪತಿ ಹೋಮ
ಸಂಜೆ 5ರಿಂದ ಪಲ್ಲಕ್ಕಿಯಲ್ಲಿ ರಾಯರ ಪಟ್ಟಣ ಸವಾರಿ ನಡೆಯಲಿದೆ.
ಚೆಂಡೆ, ಡೋಲು, ವಾದ್ಯ, ಆಕರ್ಷಕ ಭಜನೆ, ಕುಣಿತ ಭಜನೆ, ಭಕ್ತ ಸಮೂಹದೊಂದಿಗೆ ರಾಯರು ಪಲ್ಲಕಿಯಲ್ಲಿ ಸುಳ್ಯ ನಗರದಲ್ಲಿ ಸಾಗಿ ಬರಲಿದ್ದಾರೆ.ಏ.22ರಂದು ಪೂರ್ವಾಹ್ನ 9ರಿಂದ ಪಂಚ ವಿಂಶತಿ ಕಲಶ ಪೂಜೆ, ಕಲಶಾಭಿಷೇಕ, ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಶ್ರೀ ರಾಮ ತಾರಕ ಮಂತ್ರ ಹೋಮ
ಮಧ್ಯಾಹ್ನ 12ಕ್ಕೆ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ಸಂಜೆ 5ಕ್ಕೆಆಶ್ಲೇಷಾ ಬಲಿ ಪೂಜೆ 7ಕ್ಕೆರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನಾಕಾರ್ಯಕ್ರಮ:
21 ರಂದುಸಂಜೆ 4ರಿಂದ ಶ್ರೀ ಚೆನ್ನಕೇಶವ ಭಜನಾ ಮಹಿಳಾ ತಂಡ ಸುಳ್ಯ.
22 ರಂದು ಬೆಳಿಗ್ಗೆ ಗಂಟೆ 10-30ರಿಂದ. ದೀಪಾಂಜಲಿ ಭಜನಾ ಮಂಡಳಿ ಶಾಂತಿನಗರ.ಸಂಜೆ 4-00ರಿಂದ ಶ್ರೀ ಸದಾಶಿವ ಭಜನಾ ಮಂಡಳಿ ಆಲೆಟ್ಟಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಕೋಶಾಧಿಕಾರಿ ರಾಮ್ಕುಮಾರ್ ಹೆಬ್ಬಾರ್, ಟ್ರಸ್ಟಿ ರಮೇಶ್ ಕುಮಾರ್, ಶಿವಳ್ಳಿ ಸಂಪನ್ನದ ಮಾಜಿ ಅಧ್ಯಕ್ಷ ಗಂಗಾಧರ ಮಟ್ಟಿ ಉಪಸ್ಥಿತರಿದ್ದರು.
















