ಮಂಗಳೂರು:ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6 ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ (ಶ್ರೀಮಂಗಳಾ ದೇವಿ ಬಳಿ )ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’ ಹಮ್ಮಿಕೊ ಳ್ಳಲಾಗಿದೆ ಎಂದು ಕಲಾ ಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಈ ಸಂಗೀತ ಸಂಭ್ರಮದಲ್ಲಿ
ಗ್ವಾಲಿಯರ್ ಘರಾನಾ ಕಲಾಕಾರ ಡಾ.ಪಂಡಿತ್ ರಾಮ್ ದೇಶಪಾಂಡೆ ಅವರ ಹಿರಿಯ ಶಿಷ್ಯ ಖ್ಯಾತ ಹಿಂದೂಸ್ತಾನಿ ಗಾಯಕರಾದ ಆದಿತ್ಯ ಮೋದಕ್ , ಗ್ವಾಲಿಯರ್ ಕಿರಾಣಾ ಪದ್ಧತಿಯ ಗಾಯಕ ಮತ್ತು ಹಾರ್ಮೋನಿಯಂ ವಾದಕ ಸತೀಶ್ ಭಟ್ ಹೆಗ್ಗಾರ್, ಪಂಡಿತ್ ಮಾಣಿಕ್ ರಾವ್ ಅವರ ಶಿಷ್ಯ,ತಬಲಾ ವಾದಕ ಮತ್ತು ಗಾಯಕ ಅಕ್ಷಯ ಜೋಶಿ ಭಾಗವಹಿಸ ಲಿದ್ದಾರೆ.ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಬಳಿಕ ಗಣ್ಯರು ಕಲಾವಿದರಿಗೆ
ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಕಲಾ ಸಾಧನ ಸಂಸ್ಥೆ ಕಳೆದ 10 ವರ್ಷ ಗಳಿಂದ ಭಾರತೀಯ ಶಾಸ್ತ್ರೀಯ ಸಂಗೀತವನ್ನು ಪ್ರಚುರಪಡಿಸಲು ಹಲವಾರು ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳತ್ತ ಬಂದಿದೆ. ಅಲ್ಲದೆ ಯುವ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿದೆ. ತಮ್ಮ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಂಗೀತಾ ತರಬೇತಿ ಯನ್ನು ನೀಡಲಾಗುತ್ತಿದೆ ಎಂದು ವಿಭಾ ಶ್ರೀನಿವಾಸ್ ನಾಯಕ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.










