ಸುಳ್ಯ: ಪ್ರತಿಫಲಾಪೇಕ್ಷೆ ಇಲ್ಲದ ಸೇವೆ ಮತ್ತು ಕರ್ತವ್ಯಕ್ಕೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಅದಕ್ಕಾಗಿ ನಿಷ್ಕಲ್ಮಷವಾದ ಭಕ್ತಿಯಿಂದ ದೇವರಲ್ಲಿ ಶರಣಾಗಬೇಕು ಎಂದು ಪಾಲೆಪ್ಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪಕರಾದ ಡಾ. ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ ಹೇಳಿದರು.ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 5ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯನ್ನು
ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ದಿನವೂ ಹೊಸತು ಎಂದು ತಿಳಿದು ಜೀವನವನ್ನು ಆಸ್ಚಾದಿಸಬೇಕು, ಆಗ ಬದುಕು ಇನ್ನಷ್ಟು ಸುಂದರವಾಗುತ್ತದೆ ಎಂದು ಅವರು ಹೇಳಿದರು. ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಭಾರತ್ ಆಗ್ರೋ ಸರ್ವಿಸಸ್ ಮಾಲಕ ಪಿ. ರಾಮಚಂದ್ರ ಚಾರ್ಟೆಡ್ ಎಕೌಂಟೆಂಟ್ ಗಣೇಶ್ ಭಟ್, ಉದ್ಯಮಿ ಪ್ರಭಾಕರನ್ ನಾಯರ್, ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಖಜಾಂಜಿ ಮುರಳೀಕೃಷ್ಣ ಭಟ್ ಉಪಸ್ಥಿತರಿದ್ದರು.
ಸನ್ನಿಧಿ ಪ್ರಾರ್ಥಿಸಿದರು.ಟ್ರಸ್ಟ್ನ ಸಂಚಾಲಕ ಪ್ರಕಾಶ್ ಮೂಡಿತ್ತಾಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ವೇತಾ ಕೇಕುಣ್ಣಾಯ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.