ಸುಳ್ಯ: ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ‘ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿ’ ಖ್ಯಾತ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಅವರಿಗೆ ನೀಡಲಾಗುವುದು. ಏ.22ರಂದು ಶ್ರೀ ಗುರು ರಾಘವೇಂದ್ರ ಮಠದ 7ನೇ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಸಂದರ್ಭದಲ್ಲಿ
ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಡನೀರು ಮಠಾಧಿಪತಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬೃಂದಾವನ ಸೇವಾ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯ ತಾಲೂಕಿನವರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಈ ವರ್ಷದಿಂದ ಪ್ರಶಸ್ತಿ ನೀಡಲು ಆರಂಭಿಸಿದ್ದು ಪ್ರತಿ ವರ್ಷ ಸಾಧಕರನ್ನು ಗುರುತಿಸಿ ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ನೀಡಲಾಗುವುದು ಎಂದು ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ.