ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ಸಹಾಯಕವಾಗಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.