ಮುಂಬೈ: ಟೀಮ್ ಇಂಡಿಯಾ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಐಪಿಎಲ್ನ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಹಲವು ವರ್ಷಗಳ ಒಪ್ಪಂದಕ್ಕೆ ದ್ರಾವಿಡ್ ಸಹಿ ಹಾಕಿದ್ದಾರೆ ಎಂದು ಫ್ರಾಂಚೈಸಿ ಶುಕ್ರವಾರ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.ಟಿ–20 ವಿಶ್ವಕಪ್ ಸರಣಿಗೆ
ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅವಧಿ ಅಂತ್ಯವಾಗಿತ್ತು. ಸದ್ಯ, ಅವರು ವಿರಾಮದಲ್ಲಿದ್ದಾರೆ.
ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರು, 2011ರಿಂದ 2015ರವರೆಗೆ ಐದು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.2014ರಲ್ಲಿ ರಾಜಸ್ಥಾನ ರಾಯಲ್ಸ್ ಕೋಚ್ ಆಗಿದ್ದ ದ್ರಾವಿಡ್, ಬಳಿಕ ಭಾರತದ 19 ವರ್ಷದೊಳಗಿನವರ ತಂಡ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕೋಚ್ ಮತ್ತು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕೆಲಸ ಮಾಡಿದ್ದಾರೆ.