ರಾಯ್ಬರೇಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.ಇಂದು ಬೆಳಿಗ್ಗೆ ಆಗಮಿಸಿದ ರಾಹುಲ್ ಅವರನ್ನು
ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು.ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಹಾಗೂ ಸಹೋದರಿ ಪ್ರಿಯಾಂಕಾ ಗಾಂಧಿ ಇದ್ದರು.ಸೋನಿಯಾ ಗಾಂಧಿ ಅವರು ಕಳೆದ ಎರಡು ದಶಕಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ರಾಯ್ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.









