ಮಂಗಳೂರು: ಎ.27ರಂದು ರಾಹುಲ್ ಗಾಂಧಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕದ
ಉಸ್ತುವಾರಿ ರೋಜಿ ಎಂ. ಜಾನ್ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿ ಗೋಷ್ಠಿಯಲ್ಲ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ, ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮೊದಲಾದವರು ಉಪಸ್ಥಿತರಿದ್ದರು.