ವಯನಾಡ್: ಲೋಕಸಭಾ ಸದಸ್ಯತ್ವ ಮರುಸ್ಥಾಪನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ತನ್ನ ಕ್ಷೇತ್ರವಾದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿದ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್
ನೇತೃತ್ವದ ಯುಡಿಎಫ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಸಂಜೆ ವಯನಾಡ್ ತಲುಪಿದ ರಾಹುಲ್ ಅವರನ್ನು ಜಯಘೋಷಗಳೊಂದಿಗೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸಂಭ್ರಮದಿಂದ ಬರಮಾಡಿಕೊಂಡರು.
ಕಲ್ಪಟ್ಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ತನಗೆ ಪೂರ್ಣ ಬೆಂಬಲ ನೀಡಿದ ವಯನಾಡ್ ಕ್ಷೇತ್ರದೊಂದಿಗಿನ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ ಎಂದು ಹೇಳಿದರು.