ವಯನಾಡು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ್ದಾರೆ.ಜುಲೈ 30 ರಂದು ಮುಂಡಕ್ಕೈ, ಚೂರಲ್ಮಲ ಪ್ರದೇಶಗಳಲ್ಲಿ
ಭೂಕುಸಿತ ಸಂಭವಿಸಿತ್ತು. ಗುರುವಾರ ಬೆಳಿಗ್ಗೆ ಕಣ್ಣೂರಿಗೆ ಬಂದಿಳಿದ ರಾಹುಲ್ ಹಾಗೂ ಪ್ರಿಯಾಂಕಾ ರಸ್ತೆ ಮಾರ್ಗ ವಯನಾಡಿಗೆ ಆಗಮಿಸಿದರು. ದುರಂತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದ ಅವರು
ವಿವಿಧ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದರು.
ಭಾರಿ ಯಂತ್ರಗಳ ಮೂಲಕ ಕಲ್ಲುಬಂಡೆಗಳನ್ನು ತೆರುವುಗೊಳಿಸಿ, ಅವಶೇಷಗಳಡಿ ಸಿಲುಕಿರುವವರನ್ನು ಹೊರಕ್ಕೆ ತರಲು ರಕ್ಷಣಾ ತಂಡ ಎಡಬಿಡದೆ ಕಾರ್ಯಾಚರಣೆ ಮೂರನೇ ದಿನವೂ ನಡೆಸುತ್ತಿದೆ.