ಮಂಗಳೂರು: ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೆಂಟ್ರಲ್ ರೈಲು ನಿಲ್ದಾಣ ಹಾಗೂ ಕಂಕನಾಡಿಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಸೌಕರ್ಯಗಳನ್ನು ಪರಿಶೀಲಿಸಿದರು.ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಭೇಟಿ ನೀಡಿರುವ ಅವರು ರೈಲು ನಿಲ್ದಾಣ ವೀಕ್ಷಿಸಿದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಎರಿಸಲು
ಎರಡು ತಿಂಗಳಲ್ಲಿ ರೂಪರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, ’40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೆ ಸೌಕರ್ಯ ಆಭಿವೃದ್ಧಿ ಸಾಕಷ್ಟು ಆಗಿಲ್ಲ. ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕರಾವಳಿಯ ರೈಲು ಮೂಲಸೌಕರ್ಯ ಅಭಿವೃದ್ಧಿಗೆ ಎರಡು ತಿಂಗಳಲ್ಲಿ ನೀಲನಕ್ಷೆ ತಯಾರಿಸಲಿದ್ದೇವೆ’ ಎಂದು ಅವರು ಹೇಳಿದರು.
ಪಾಲಕ್ಕಾಡ್ ವಿಭಾಗದ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರಿನಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಸೌಕರ್ಯಗಳ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜ,ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರು ಭಾಗವಹಿಸಿದ್ದರು.