ಮಂಗಳೂರು:ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ವಾಗತಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರಿಗೆ ಸಾಂಪ್ರದಾಯಿಕ ಚಂಡೆ ವಾದ್ಯ ಸ್ವಾಗತ ನೀಡಲಾಯಿತು.














