ಮಂಗಳೂರು:ಸುಳ್ಯ ವಿಧಾನ ಸಭಾ ಕ್ಷೇತ್ರದ ರೈಲ್ವೆ ಸಮಸ್ಯೆಗಳನ್ನು ಪತಿಹರುಸಬೇಕು ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ. ಇಂದು ಮಂಗಳೂರಿನಲ್ಲಿ
ನಡೆದ ಸಭೆಯಲ್ಲಿ ಸಚಿವರಿಗೆ ಕ್ಷೇತ್ರದ ರೈಲ್ವೆ ಸಂಬಂಧಿತ ಎಲ್ಲಾ ಸಮಸ್ಯೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯ ಕುಮಾರ್ ಕಂದಡ್ಕ ಮತ್ತು ಪ್ರದೀಪ್ ರೈ ಮನವಳಿಕೆ ಉಪಸ್ಥಿತರಿದ್ದರು