ಸುಬ್ರಹ್ಮಣ್ಯ: ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ
ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇನ್ನೇನು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ 50 ವರ್ಷ ತುಂಬಲಿದೆ. ಈ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಸಮಗ್ರ ಮೂಲಭೂತ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿ ಕೆಲಸ ಪೂರ್ಣಗೊಳ್ಳಬೇಕಿದೆ. ಇಲ್ಲಿನ ರೈಲು ನಿಲ್ದಾಣದ ಬೇಡಿಕೆಗಳು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯ ಅನುದಾನದಲ್ಲಿ ಈಡೇರಲಿದೆ. ಮುಂದೆಯೂ ಇಲ್ಲಿನ ಬೇಡಿಕೆಗಳ ಬಗ್ಗೆ ಸಂಬಂಧಿಸಿದವರಲ್ಲಿ ಮನವಿ ಮಾಡಿ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ ಅವರು ರೈಲ್ವೇ ಉದ್ಯೋಗಕ್ಕೆ ನಮ್ಮ ಭಾಗದ ಅಭ್ಯರ್ಥಿಗಳು ನೇಮಕೊಂಡಲ್ಲಿ ಈ ಭಾಗಕ್ಕೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದರು.
ಸುಳ್ಯ ಬಿಜೆಪಿ ಮಂಡಲದ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ದಿನೇಶ್,ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಮಾತನಾಡಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಫಝಲ್ ಕೋಡಿಂಬಾಳ, ರೈಲ್ವೇ ಇಲಾಖೆಯ ರಾಘವೇಂದ್ರ, ನೆಟ್ಟಣ ರೈಲು ಬಳಕೆದಾರರ ಸಂಘದ ಅಧ್ಯಕ್ಷ ಕೆ.ಜಿ.ಪ್ರಸಾದ್ ನೆಟ್ಟಣ, ರೋಯಿ ಅಬ್ರಾಹಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೈಲ್ವೇ ಇಲಾಖೆಯ ಸುರೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಆರಂಭದಲ್ಲಿ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಅಭಿವೃದ್ಧಿಗೊಳ್ಳಲಿರುವ ಕಡಬ ತಾಲೂಕಿನ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ, ಬಜಕೆರೆ ರೈಲು ನಿಲ್ದಾಣ ಸಮೀಪ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ದೇಶದ ವಿವಿಧ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ರೈಲು ನಿಲ್ದಾಣಗಳಲ್ಲಿ ಎಲ್ಇಡಿ ಪರದೆ ಮೂಲಕ ವಿಡಿಯೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.