ಬೆಂಗಳೂರು: ಸುಳ್ಯ ನಗರ ಸೇರಿ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಬುಧವಾರ ಮಧ್ಯಾಹ್ನ 3 ಗಂಟೆಯ ಬಳಿಕ ಸುಳ್ಯ ನಗರದಲ್ಲಿ ಸಾಮಾನ್ಯ ಮಳೆಯಾಗಿದೆ. ಅಲ್ಲದೆ ತಾಲೂಕಿನ ಹಾಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ. ನ.2ರ ಬಳಿಕ
ರಾಜ್ಯದಲ್ಲಿ ಮತ್ತೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಸೇರಿ ರಾಜ್ಯಾದ್ಯಂತ ಇನ್ನೂ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭಗೊಂಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ತೆಲಂಗಾಣ, ಕೊಂಕಣ, ಗೋವಾದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.