ಸುಳ್ಯ: ಭಾರೀ ಮಳೆಯಿಂದ ಪಯಸ್ವಿನಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಪೆರಾಜೆಯಿಂದ ಅರಂಬೂರು ತನಕ
ನದಿ ಬದಿಯಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿಗೆ ಸಮಾನಾಂತರವಾಗಿ ನೀರಿನ ಮಟ್ಟ ಏರಿಕೆಯಾಗಿದ್ದು ಮಳೆ ಮುಂದುವರಿದು ನದಿ ನೀರಿನ ಮಟ್ಟ ಇನ್ನಷ್ಟು ಏರಿದರೆ ನದಿಯ ನೀರು
ರಸ್ತೆಗೆ ಬರುವ ಸಾಧ್ಯತೆ ಇದೆ. ಆದುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸ್ಥಳೀಯರು ತಿಳಿಸಿದ್ದಾರೆ. ಭಾರೀ ಮಳೆಯಾಗಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದರೆ ಅರಂಬೂರಿನಲ್ಲಿ ನದಿ ನೀರು ರಸ್ತೆಗೆ ನುಗ್ಗುತ್ತದೆ.ಈ ಮಧ್ಯೆ ಪೆರಾಜೆ ಸಮೀಪ ಮಳೆಗೆ ಬರೆ, ಬರೆ ಕುಸಿದು ರಸ್ತೆಗೆ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರಿಂದ ರಸ್ತೆಯಲ್ಲಿ ಭಾಗಷಃ ತಡೆ ಉಂಟಾಗಿದೆ ಎಂದು ವರದಿಯಾಗಿದೆ.












