ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಒಂದು ತಿಂಗಳ ಬಳಿಕ ಸಿಲಿಕಾನ್ ಸಿಟಿ ತಂಪಾಗಿದ್ದು, ರಾತ್ರಿಯಿಡೀ ಮಳೆಯಾಗಿದೆ. ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗಿರಲಿಲ್ಲ, ಆಗಸ್ಟ್ನ ಕಡೆಯ ದಿನ ಭಾರೀ ಮಳೆ ಸುರಿದಿದ್ದು, ಬೆಂಗಳೂರು ಮತ್ತೆ ತಂಪಾಗಿದೆ.ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ವಿ. ನಾಗೇನಹಳ್ಳಿ, ಯಲಹಂಕ ಸೇರಿದಂತೆ
ಬೆಂಗಳೂರು ಉತ್ತರ ಭಾಗದಲ್ಲಿ ಜೋರು ಮಳೆ ಆಯಿತು. ಸಿಡಿಲು ಹಾಗೂ ಗುಡುಗಿನ ಅಬ್ಬರವೂ ಹೆಚ್ಚಿತ್ತು.
ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಹುಳಿಮಾವು, ಗೊಟ್ಟಿಗೆರೆ, ಬಿಟಿಎಂ ಲೇಔಟ್, ಎಚ್ಎಸ್ಆರ್ ಲೇಔಟ್, ಜೆ.ಪಿ.ನಗರ, ಸರ್ಜಾಪುರ ಕೆಂಗೇರಿ, ರಾಜರಾಜೇಶ್ವರಿನಗರ, ನಾಯಂಡನಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ಬನಶಂಕರಿ, ಜಯನಗರ, ಮಡಿವಾಳ, ಚಿಕ್ಕಪೇಟೆ, ಗಾಂಧಿನಗರ, ಮೆಜೆಸ್ಟಿಕ್, ಶೇಷಾದ್ರಿಪುರ, ಮಲ್ಲೇಶ್ವರ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್, ಸಂಜಯನಗರ, ಹೆಬ್ಬಾಳ, ಆರ್.ಟಿ.ನಗರ, ವಸಂತನಗರ, ಶಿವಾಜಿನಗರ, ಎಂ.ಜಿ.ರಸ್ತೆ, ಅಶೋಕನಗರ, ವಿವೇಕನಗರ, ಕೋರಮಂಗಲ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸುರಿಯಿತು.ವಿವಿಧೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಇನ್ನು ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಓಲ್ಡ್ ಏರ್ಪೋರ್ಟ್ ರೋಡ್ ಕೋರಮಂಗಲ ಸೇರಿದಂತೆ ಹಲವು ರಸ್ತೆಗಳು ಜಲಾವೃತವಾಗಿವೆ.
ಇನ್ನೂ ಎರಡು ದಿನ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.