ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ಮಖೆಯಾಗಿದ್ದು ಮಖೆಗಾಲದ ವಾತಾವರಣ ಉಂಟಾಗಿದೆ. ಸುಳ್ಯ ನಗರದಲ್ಲಿ ಮಧ್ಯಾಹ್ನದ ಬಳಿಕ ಹನಿ ಮಳೆಯಾಗಿದೆ. ನಿರಂತರ ಜಿಟಿ ಜಿಟಿ ಮಳೆಯಾಗಿದ್ದು. ತಾಲೂಕಿನ ಬೆಳ್ಳಾರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಹನಿ ಮಳೆ, ಸಾಧಾರಣ ಮಳೆಯಾಗಿದೆ. ಮೋಡ
ಕವಿದ ವಾತಾವರಣ ಇದೆ. ಮುಂಗಾರು ಕೇರಳ ಪ್ರವೇಶಿಸಿದ ಬೆನ್ನಲ್ಲೇ ಕರಾವಳಿಯ ವಿವಿಧೆಡೆ ಮಳೆಯಾಗುತಿದೆ. ಬಿಫೋರ್ಜಾಯ್ ಚಂಡಮಾರುತದ ಪರಿಣಾಮದಿಂದಲೂ ಮಳೆಯಾಗುವ ಸೂಚನೆ ಇದೆ.
ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಬಿಪೊರ್ಜಾಯ್ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಅತ್ಯಂತ ತೀವ್ರ ಬಿಪೊರ್ಜಾಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.ಗುಜರಾತ್ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಸೌರಾಷ್ಟ್ರ ಮತ್ತು ಕಚ್ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ.