ಸುಳ್ಯ: ಸಾಮಾನ್ಯದಿಂದ ಉತ್ತಮ ಮಳೆಯಾಗಿರುವ ಸುಳ್ಯ ನಗರದಲ್ಲಿ ಕಳೆದ 24 ಗಂಟೆಯಲ್ಲಿ 54 ಮಿ.ಮಿ.ಮಳೆ ಸುರಿದಿದೆ. ಬೆಳ್ಳಾರೆ ಕಾವಿನಮೂಲೆಯಲ್ಲಿ 11 ಮಿ.ಮೀ, ದೊಡ್ಡತೋಟದ ಬಳಿ ಕಿಲಾರ್ಕಜೆಯಲ್ಲಿ 28 ಮಿ. ಮೀ.ಮಳೆಯಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಿನ್ನೆ ಮಳೆಯಾಗಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ