ಬೆಂಗಳೂರು: ಸೋಮವಾರ ಹಾಗೂ ಮಂಗಳವಾರ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ
ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ರಾಜ್ಯದಲ್ಲಿ ಮೇ 31ರ ಬಳಿಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ–ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮೇ 31ರಂದು ಜೂನ್ 1ರಂದು ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.