ಮಂಗಳೂರು:ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಜುಲೈ 5ರ ವರೆಗೆ ಭಾರೀ ಮಳೆ
ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ 1 ರಿಂದ 3ರವರೆಗೆ ಯಲ್ಲೋ ಅಲರ್ಟ್, ಜುಲೈ 4 ಹಾಗೂ 5ರಂದು ಆರೆಂಜ್ ಅಲರ್ಟ್ ಘೋಷಿಸಿದೆ.ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.ಜುಲೈ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಹಾಗೂ ಜುಲೈ 2ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.