ಮಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ
ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸುಳ್ಯದಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಸುಳ್ಯ ನಗರದಲ್ಲಿ ಗುರುವಾರ ಸಂಜೆ 3 ಗಂಟೆಯಿಂದ 4 ಗಂಟೆಯ ತನಕ ಒಂದು ಗಂಟೆಗೂ ಹೆಚ್ಚು ಮಳೆಯಾಗಿದ್ದು 57 ಮಿ.ಮಿ.ಮಳೆ ಸುರಿದಿದೆ ಎಂದು ಮಳೆ ಲೆಕ್ಕ ಮಾಡಿ ದಾಖಲಿಸುವ ಶ್ರೀಧರ ರಾವ್ ತಿಳಿಸಿದ್ದಾರೆ.