ಸುಳ್ಯ:ಭಾನುವಾರ ಸಂಜೆ ಸುಳ್ಯದಲ್ಲಿ ಭಾರೀ ಮಳೆ ಸುರಿದಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಗುಡುಗು ಮಿಂಚಿನ ಅಬ್ಬರದೊಂದಿಗೆ ಭಾರೀ ಮಳೆಯಾಗಿದೆ. ಸಂಜೆ 7 ಗಂಟೆಯ ವೇಳೆಗೆ ಆರಂಭವಾದ ಮಳೆ ಹಾಗೂ
ಗುಡುಗು, ಸಿಡಿಲಿನ ಅಬ್ಬರದೊಂದಿಗೆ 8 ವರೆಗೆ ಮುಂದುವರಿಯಿತು. ಎಲ್ಲೆಡೆ ಮಳೆ ನೀರು ತುಂಬಿ ಹರಿದಿದೆ.ರಸ್ತೆಯಲ್ಲಿ, ಚರಂಡಿ ಭಾರೀ ಪ್ರಮಾಣದಲ್ಲಿ ನೀರು ತುಂಬಿ ಹರಿಯುತ್ತಿತ್ತು. ಮಳೆಗಾಲ ನೆನಪಿಸುವಂತೆ ಕುಂಭ ದ್ರೋಣ ಮಳೆ ಸುರಿಯಿತು. ರಾತ್ರಿಯೂ ತುಂತುರು ಮಳೆ ಮುಂದುವರಿದಿದೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹಲವೆಡೆ ಗಾಳಿಯೂ ಬೀಸಿದೆ. ಭಾರೀ ಗಾಳಿಗೆ ಕೆಲವೆಡೆ ಹಾನಿ ಸಂಭವಿಸಿದ ಬಗ್ಗೆಯೂ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತಿದೆ. ಕರಾವಳಿ ಜಿಲ್ಲೆಗಳು ಸೇದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದ್ದು ರಾಜ್ಯದ ವಿವಿಧ ಭಾಗಗಳಲ್ಲಿ ನ.,9ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.









