ಸುಳ್ಯ: ಸುಳ್ಯದಲ್ಲಿ ಮಂಗಳವಾರ ಬೆಳಿಗ್ಗಿನಿಂದ ಧಾರಾಕಾರ ಮಳೆ ಸುರಿಯುತಿದೆ. ಬೆಳಿಗ್ಗಿನಿಂದ ಕತ್ತಲು ಕವಿದು ನಿರಂತರ ಮಳೆ ಸುರಿಯುತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ತಡರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.ದ.ಕ.ಜಿಲ್ಲೆಯ
ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ತಾಲ್ಲೂಕುಗಳ ಅನೇಕ ಕಡೆಗಳಲ್ಲಿ ಮಳೆಯಾಗಿದೆ . ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21 ರಂದು ರೆಡ್ ಅಲರ್ಟ್, ಮೇ 22, 23ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದೆ. ಗುಡುಗು, ಮಿಂಚು ಸಹಿತ ಸುರಿದ ಭಾರಿ ಮಳೆಯಿಂದ ನಗರದ ಅರ್ಧಭಾಗ ಜಲಾವೃತಗೊಂಡಿತು.ನಗರದ ವಿವಿಧ ಭಾಗಗಳಲ್ಲಿ ಸುರಿದ ಬಿರುಸಾದ ಮಳೆಯಿಂದ ಹಲವು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿತು, ಪ್ರಮುಖ ರಸ್ತೆಗಳು ಜಲಾವೃತವಾಗಿತ್ತು. ಇದರಿಂದ ವಾಹನ ಸಂಚಾರ ಸ್ಥಗಿತಗೊಂಡಿತು.ನಗರದ ಎಲ್ಲ ಭಾಗಗಳಲ್ಲೂ ಭಾರಿ ಮಳೆಯಾಗಿದ್ದು ಜನರು ಸಂಕಷ್ಟಕ್ಕೆ ಸಿಲುಕಿದರು.