ಸುಳ್ಯ: ಸುಳ್ಯದಲ್ಲಿ ಶನಿವಾರ ಹಗಲು ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಭಾರೀ ಮಳೆಯಾಗಿದೆ.ಸಂಜೆಯ ವೇಳೆಗಡ ಸ್ವಲ್ಪ ಬಿಡುವು ನೀಡಿತು. ರಾತ್ರಿ ಮತ್ತೆ ಮಳೆ ಸುರಿದಿದೆ. ಸುಳ್ಯ ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದೆ. ಮಳೆ ಮುಂದುವರಿಯುವ
ಸೂಚನೆ ಇದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿಯು ಗಂಟೆಗೆ 30–40 ಕಿ.ಮೀ ವೇಗದಲ್ಲಿ ಬೀಸಲಿದೆ. ಕರಾವಳಿ ವ್ಯಾಪ್ತಿಯಲ್ಲಿ ಗಾಳಿ ಗಂಟೆಗೆ 40 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ.