ಮಂಗಳೂರು: ಮುಂಗಾರು ಮಳೆ ಚುರುಕುಗಿಂಡಿದ್ದು ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಾರವಾರ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು ಮಳೆ ಮುಂದುವರಿದಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಜೂ. 27ರವರೆಗೂ ಭಾರಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ ಸರಾಸರಿ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.