ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಏ.20 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ
ಮಳೆಯಾಗಬಹುದು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಬಲವಾಗಿ ಗಾಳಿ ಬೀಸುವ ಸಾಧ್ಯತೆಯಿದೆ.ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕಲಬುರಗಿಯಲ್ಲಿ ಭಾನುವಾರ ಅತ್ಯಧಿಕ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 41.4, ಡಿಗ್ರಿ ಸೆಲ್ಸಿಯಸ್, ಬೀದರ್ನಲ್ಲಿ 41.2 ಡಿಗ್ರಿ, ಕೊಪ್ಪಳದಲ್ಲಿ 39.9 ಡಿಗ್ರಿ, ವಿಜಯಪುರದಲ್ಲಿ 39.6 ಡಿಗ್ರಿ, ಬಾಗಲಕೋಟೆ ಹಾಗೂ ಗದಗದಲ್ಲಿ 39.2 ಡಿಗ್ರಿ, ಬೆಂಗಳೂರು ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
















