ಸುಳ್ಯ: ಮಂಗಳವಾರ ರಾತ್ರಿ ಸುಳ್ಯ ಸೇರಿದಂತೆ ದ.ಕ.ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು ಮಳೆ ಮುಂದುವರಿಯುವ ಸೂಚನೆ ಇದೆ. ಕರಾವಳಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮಳೆಯಾಗಿದೆ. ಬಂಟ್ವಾಳ, ಸುಳ್ಯ, ಮಿತ್ತೂರು ಸಹಿತ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಿನ್ನೆ ಸಂಜೆ ಸಾಧಾರಣ ಮಳೆಯಾಗಿದೆ. ಭಾರೀ ಸೆಕೆ ಮತ್ತು ಏರಿದ ಉಷ್ಣಾಂಶದಿಂದ ಕಂಗೆಟ್ಟಿದ್ದ ಜನತೆಗೆ ಮಳೆ ತಂಪೆರೆದಿರುವುದು ಸಂತಸ ತಂದಿದೆ.












