ಸುಳ್ಯ: ಸುಳ್ಯ ನಗರ ಸೇರಿದಂತೆ ವಿವಿದ ಭಾಗಗಳಲ್ಲಿ ಸೋಮವಾರ ರಾತ್ರಿ ಮಳೆ ಸುರಿದಿದೆ. ವಿವಿಧ ಕಡೆ ಹನಿ ಮಳೆ, ಸಾಧಾರಣ ಮಳೆಯಾಗಿದೆ. ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇದ್ದು ರಾತ್ರಿ ವೇಳೆ ಸಾಧಾರಣ ಮಳೆಯಾಗಿದೆ. ಸುಳ್ಯ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗಿದ್ದು ಎರಡು ದಿನ ಮಳೆ ಮುಂದುವರಿಯುವ ಸೂಚನೆ ಇದೆ. ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಆಧಾರಣ ಮಳೆಯಾಗುವ ಸಾಧ್ಯತೆ
ಇದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ತಿಂಗಳು ವಾಡಿಕೆಗಿಂತ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ಇದೆ.





