ಬೆಂಗಳೂರು:ರಾಜ್ಯದ ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಭಾಗಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯ
ಒಂದೆರಡು ಕಡೆ ಶನಿವಾರ ಹಗುರವಾಗಿ ಮಳೆಯಾಗಲಿದೆ. ಇದಲ್ಲದೆ ಕರಾವಳಿಯ ಮೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆ ಕಂಡು ಬಂದಿದೆ.










