ಸುಳ್ಯ:ಕಳೆದ ಒಂದು ತಿಂಗಳಿನಿಂದ ಅಬ್ಬರಿಸಿದ್ದ ಮಳೆಗೆ ಸ್ವಲ್ಪ ಬಿಡುವು. ಹಲವು ದಿನಗಳಿಂದ ಕಾರ್ಮೋಡ ಕವಿದು ಸುರಿದ ಕುಂಭದ್ರೋಣ ಮಳೆಯ ಅಬ್ಬರ ಕಡಿಮೆಯಾಗಿದೆ. ಸೋಮವಾರ ಬೆಳಿಗ್ಗೆ ಸುಳ್ಯದಲ್ಲಿ ಸ್ವಲ್ಪ ಬಿಸಿಲು ಕಾಣಿಸಿಕೊಂಡಿದೆ. ಭಾನುವಾರ ಮಳೆಯಾಗಿದ್ದರೂ ಅಬ್ಬರ
ಕೊಂಚ ಕಮ್ಮಿಯಾಗಿತ್ತು. ಇಂದಿನಿಂದ ಮಳೆ ಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ಮೋಡಕವಿದ ವಾತಾವರಣವಿರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.