ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರವೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ
ಸಾಧಾರಣ ಮಳೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆ ಆಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರವೂ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳು ಹಾಗೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ. ಕೊಡಗು ಜಿಲ್ಲೆಯ ಕೆಲವು ಭಾಗಗಳು ಸೇರಿದಂತೆ ರಾಜ್ಯದ ಕೆಲವೆಡೆ ಭಾನಿವಾರ ಮಳೆಯಾಗಿದೆ.